Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:10 - ಕನ್ನಡ ಸತ್ಯವೇದವು C.L. Bible (BSI)

10 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:10
9 ತಿಳಿವುಗಳ ಹೋಲಿಕೆ  

ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.


ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.


ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.


ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು