ನ್ಯಾಯಸ್ಥಾಪಕರು 4:15 - ಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ತುತ್ತಾಗಿಸಿದರು. ಸೀಸೆರನು ರಥದಿಂದ ಹಾರಿ ಓಡಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನು ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ಬಲಿಕೊಟ್ಟನು. ಸೀಸೆರನು ರಥದಿಂದ ಹಾರಿ ಓಡಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಸೀಸೆರನನ್ನೂ, ಅವನ ಎಲ್ಲಾ ರಥಗಳನ್ನೂ, ಅವನ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಖಡ್ಗದಿಂದ ಚದರಿಸಿದರು. ಸೀಸೆರನು ರಥದಿಂದ ಇಳಿದು ಓಡಿಹೋದನು. ಅಧ್ಯಾಯವನ್ನು ನೋಡಿ |