Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:16 - ಕನ್ನಡ ಸತ್ಯವೇದವು C.L. Bible (BSI)

16 ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಛರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾರಾಕನು ಅವನ ಸೈನ್ಯ, ರಥಗಳನ್ನು ಹರೋಷೆತ್ ಹಗ್ಗೋಯಿಮಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಖಡ್ಗದಿಂದ ಹತರಾದರು, ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:16
13 ತಿಳಿವುಗಳ ಹೋಲಿಕೆ  

ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್‍ಯಾಬೀನರಿಗೆ ಮಾಡಿದಂತೆ II


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.


ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು