Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:21 - ಕನ್ನಡ ಸತ್ಯವೇದವು C.L. Bible (BSI)

21 ಆದರೆ ಹೆಬೆರನ ಹೆಂಡತಿ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ ಒಂದು ಕೊಡತಿಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ ಮೆಲ್ಲಗೆ ಹತ್ತಿರ ಹೋಗಿ ಅವನ ಕಣತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ ಒಂದು ಕೊಡತಿಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ ಮೆಲ್ಲಗೆ ಹತ್ತಿರ ಹೋಗಿ ಅವನ ಕಣತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆಯನ್ನು ತೆಗೆದು, ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದುಕೊಂಡು, ಅವನು ಆಯಾಸದಿಂದ ನಿದ್ರೆ ಮಾಡುತ್ತಿರುವಾಗ, ಮೆಲ್ಲನೆ ಅವನ ಬಳಿಗೆ ಬಂದು, ಅವನ ತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿಸಿದಳು. ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:21
12 ತಿಳಿವುಗಳ ಹೋಲಿಕೆ  

ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಆಗ ಏಹೂದನು ಎಡಗೈ ಚಾಚಿ, ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯನ್ನು ತಿವಿದನು.


“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?


“ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.


ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,


ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.


ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.


ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯ ಇರುವನೇ?’ ಎಂದು ವಿಚಾರಿಸಿದರೆ, ‘ಇಲ್ಲ’ ಎನ್ನು” ಎಂದು ಹೇಳಿದನು.


ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ,” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತುಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು