Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:5 - ಕನ್ನಡ ಸತ್ಯವೇದವು C.L. Bible (BSI)

5 ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:5
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಗಿಬ್ಯೋನ್, ರಾಮಾ, ಬೇರೋತ್,


ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,


ಅಲ್ಲಿಂದ ಅರ್ಕೀಯರ ಎಲ್ಲೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.


ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.


ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ.


ಮಾರನೆಯ ದಿನ ಮೋಶೆ ಜನರಿಗೆ ನ್ಯಾಯ ತೀರಿಸಲು ಕುಳಿತಿದ್ದನು. ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ಅವನ ಸುತ್ತಲು ನಿಂತಿದ್ದರು.


ಅಲ್ಲಿರುವಾಗ ರೆಬೆಕ್ಕಳ ದಾದಿ ದೆಬೋರಳು ಸತ್ತುಹೋದಳು. ಆಕೆಯನ್ನು ಬೇತೇಲಿನ ಕಣಿವೆಯಲ್ಲಿರುವ ಮತ್ತೊಂದು ಓಕ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ‘ಅಲ್ಲೋನ್ ಬಾಕೂತ್’ ಎಂದು ಹೆಸರಿಟ್ಟರು.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.


ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.


ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು