Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:6 - ಕನ್ನಡ ಸತ್ಯವೇದವು C.L. Bible (BSI)

6 ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:6
21 ತಿಳಿವುಗಳ ಹೋಲಿಕೆ  

ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.


ಕೆದೆಷ್, ಎದ್ರೈ, ಏನ್ ಹಾಚೋರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್, ಬೇತ್ ಷೆಮೆಷ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲಗಳುಳ್ಳ ನಗರಗಳೂ ಅವುಗಳ ಗ್ರಾಮಗಳೂ


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’


ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.


ಆ ದಿನ ದೆಬೋರಳು ಮತ್ತು ಅಬೀನೋವಮನ ಮಗ ಬಾರಾಕನು ಈ ಗೀತೆಯನ್ನು ಹಾಡಿದರು:


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


ನಫ್ತಾಲಿ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯನಗರವಾದ ಗಲಿಲೇಯದ ಕೆದೆಷ್, ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ನಗರಗಳು.


ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ:


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.


ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಚಿದ್ದೀಮ್, ಚೇರ್, ಹಮ್ಮತ್,


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು