Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:7 - ಕನ್ನಡ ಸತ್ಯವೇದವು C.L. Bible (BSI)

7 ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಯಾಬೀನನ ಸೇನಾಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:7
17 ತಿಳಿವುಗಳ ಹೋಲಿಕೆ  

ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ,” ಎಂದನು.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು