Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:15 - ಕನ್ನಡ ಸತ್ಯವೇದವು C.L. Bible (BSI)

15 ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲ ಪ್ರಭುಗಳೂ ಇಸ್ಸಾಕಾರ್ಯರೊಡನೆ ಬಾರಾಕನೂ ಆಗವಿುಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ಸರ್ರನೆ ತಗ್ಗಿಗೆ ಬಂದರು. ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ತೀರ್ಮಾನಗಳು ಘನವಾದವುಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. “ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. ರೂಬೇನನ ಕಡೆಯವರು ತಮ್ಮ ಹೃದಯಗಳನ್ನು ಮಹಾ ಪರಿಶೋಧನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:15
10 ತಿಳಿವುಗಳ ಹೋಲಿಕೆ  

ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಪೌಲನು ನಮಗಿತ್ತ ಸೂಚನೆಯ ಪ್ರಕಾರ ನಾವು ಹಡಗುಹತ್ತಿ ಅಸ್ಸೊಸಿ ಎಂಬ ಊರಿಗೆ ಮುಂಚಿತವಾಗಿ ಪ್ರಯಾಣಮಾಡಿದೆವು. ತಾನು ಅಲ್ಲಿಗೆ ಭೂಮಾರ್ಗವಾಗಿ ಬರುವುದಾಗಿಯೂ ಅಲ್ಲಿ ತನ್ನನ್ನು ಹಡಗಿಗೆ ಏರಿಸಿಕೊಳ್ಳಬೇಕೆಂದೂ ಪೌಲನು ತಿಳಿಸಿದ್ದನು.


ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.


“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.


ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು