Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:16 - ಕನ್ನಡ ಸತ್ಯವೇದವು C.L. Bible (BSI)

16 ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ ಕೂತಿರುವದೇಕೆ? ಮಂದೆಗಳ ಮಧ್ಯದಲ್ಲಿ ಕೊಳಲೂದುವದನ್ನು ಕೇಳಬೇಕೆಂದಿದ್ದೀರೋ? ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ವಿಚಾರಗಳು ಬಹು ಘನವಾದವುಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗಿರಲು ನೀವು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:16
11 ತಿಳಿವುಗಳ ಹೋಲಿಕೆ  

ನಿಮ್ಮ ಕುಟುಂಬಗಳಿಗಾಗಿ ಊರುಗಳನ್ನೂ ನಿಮ್ಮ ದನಕುರಿಗಳಿಗಾಗಿ ದೊಡ್ಡಿಗಳನ್ನೂ ಕಟ್ಟಿಕೊಂಡು ನಿಮ್ಮ ಮಾತಿನಂತೆ ನಡೆದುಕೊಳ್ಳಿ,” ಎಂದನು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.


ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.


ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II


ಅವರಿಗೆ ಮೋಶೆ, “ನಿಮ್ಮ ಬಂಧುಬಳಗದವರು ಯುದ್ಧಕ್ಕೆ ಹೊರಡುವಾಗ ನೀವು ಇಲ್ಲೇ ಕೂತಿರಬೇಕೆನ್ನುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು