Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:18 - ಕನ್ನಡ ಸತ್ಯವೇದವು C.L. Bible (BSI)

18 ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜೆಬುಲೂನ್ಯರೂ ನಫ್ತಾಲ್ಯರೂ ಅಂಥವರಲ್ಲ; ಅವರು ಬೈಲಿನ ದಿನ್ನೆಗಳಲ್ಲಿ ತಮ್ಮ ಜೀವವನ್ನು ಮರಣಾಪತ್ತಿಗೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:18
11 ತಿಳಿವುಗಳ ಹೋಲಿಕೆ  

ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.


ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ದಾನ್, ನಫ್ತಾಲಿ - ಇವರು ರಾಖೇಲಳ ದಾಸಿ ಬಿಲ್ಹಳಲ್ಲಿ ಹುಟ್ಟಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು