Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:19 - ಕನ್ನಡ ಸತ್ಯವೇದವು C.L. Bible (BSI)

19 ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸರು ಬಂದು ಯುದ್ಧಮಾಡಿದರು; ಕಾನಾನ್ಯರಾಜರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಕಾದಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:19
19 ತಿಳಿವುಗಳ ಹೋಲಿಕೆ  

‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು.


ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ಮೆಗಿದ್ದೋವಿನ ಅರಸ - 1 ಕೆದೆಷಿನ ಅರಸ - 1


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು