Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:2 - ಕನ್ನಡ ಸತ್ಯವೇದವು C.L. Bible (BSI)

2 ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:2
23 ತಿಳಿವುಗಳ ಹೋಲಿಕೆ  

ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಅಮಸ್ಯ - ಜಿಕ್ರಿಯ ಮಗನಾದ ಇವನು ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಛೆಯಿಂದ ತನ್ನನ್ನೇ ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಂಡಿದ್ದನು;


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು