Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:31
39 ತಿಳಿವುಗಳ ಹೋಲಿಕೆ  

ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.


ಅಮರವಾಗಿರುವುದು ಚಂದ್ರನಂತೆ I ಆಗಸದಾ ಪ್ರಮಾಣ ಸಾಕ್ಷಿಯಂತೆ” II


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.


ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು