Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:7 - ಕನ್ನಡ ಸತ್ಯವೇದವು C.L. Bible (BSI)

7 ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೆಬೋರಳಾದ ನಾನು ಇಸ್ರಾಯೇಲ್ಯರಲ್ಲಿ ತಾಯಿಯಂತೆ ಎದ್ದು ಬರುವವರೆಗೆ ಇಸ್ರಾಯೇಲ್‍ಗ್ರಾಮಗಳು ಹಾಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೆಬೋರಳಾದ ನಾನು ಏಳುವವರೆಗೂ, ಇಸ್ರಾಯೇಲಿನಲ್ಲಿ ತಾಯಿಯಾಗಿ ನಾನು ಏಳುವವರೆಗೂ ಇಸ್ರಾಯೇಲಿನ ಹಳ್ಳಿಗಳ ನಿವಾಸಿಗಳು ಯುದ್ಧಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:7
7 ತಿಳಿವುಗಳ ಹೋಲಿಕೆ  

ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ಪ್ರಭುವಿನ ಭಕ್ತರಲ್ಲಿ ಹೆಸರುವಾಸಿಯಾದ ರೂಫನಿಗೂ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡ ಅವರ ತಾಯಿಗೂ ನನ್ನ ವಂದನೆಗಳು.


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.


ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು