Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:8 - ಕನ್ನಡ ಸತ್ಯವೇದವು C.L. Bible (BSI)

8 ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:8
8 ತಿಳಿವುಗಳ ಹೋಲಿಕೆ  

ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು