ನ್ಯಾಯಸ್ಥಾಪಕರು 6:11 - ಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಅಧ್ಯಾಯವನ್ನು ನೋಡಿ |