Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:13
22 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು