ನ್ಯಾಯಸ್ಥಾಪಕರು 6:16 - ಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡವಿದ್ದೇನೆ! ಆದ್ದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು. ಅಧ್ಯಾಯವನ್ನು ನೋಡಿ |
ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).