Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:18 - ಕನ್ನಡ ಸತ್ಯವೇದವು C.L. Bible (BSI)

18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು,” ಎಂದು ಬಿನ್ನವಿಸಲು ಅವರು, “ನೀನು ತಿರುಗಿ ಬರುವವರೆಗೆ ನಾನು ಇಲ್ಲೇ ಇರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು ಎಂದು ಬಿನ್ನವಿಸಲು ಆತನು - ನೀನು ತಿರಿಗಿ ಬರುವವರೆಗೆ ನಾನು ಇಲ್ಲೇ ಇರುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:18
6 ತಿಳಿವುಗಳ ಹೋಲಿಕೆ  

ಮತ್ತೆ ಮಾನೋಹನು ಸರ್ವೇಶ್ವರನ ದೂತನನ್ನು, “ನಾವು ನಿಮಗಾಗಿ ಒಂದು ಹೋತಮರಿಯನ್ನು ಅಡಿಗೆ ಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು ಎಂದು ಬೇಡಿಕೊಂಡನು. ಅವನು,


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.


“ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.


ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು