Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:21 - ಕನ್ನಡ ಸತ್ಯವೇದವು C.L. Bible (BSI)

21 ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:21
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.


ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು.


ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಸರ್ವೇಶ್ವರನಿಗೆ ಸಮರ್ಪಿಸಿದನು. ಮಾನೋಹನು ಮತ್ತು ಅವನ ಹೆಂಡತಿ ನೋಡುತ್ತಿರುವಾಗಲೇ ಸರ್ವೇಶ್ವರನ ದೂತನು ಒಂದು ಆಶ್ಚರ್ಯಕಾರ್ಯ ಮಾಡಿದನು.


ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು