Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:23 - ಕನ್ನಡ ಸತ್ಯವೇದವು C.L. Bible (BSI)

23 ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಯೆಹೋವನು ಅವನಿಗೆ - ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಶಾಂತನಾಗು, ಭಯಪಡಬೇಡ, ನೀನು ಸಾಯುವುದಿಲ್ಲ” ಎಂದು ಗಿದ್ಯೋನನಿಗೆ ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಅವನಿಗೆ, “ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:23
12 ತಿಳಿವುಗಳ ಹೋಲಿಕೆ  

ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಆಗ ಆ ಮುದುಕ, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು