Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:24 - ಕನ್ನಡ ಸತ್ಯವೇದವು C.L. Bible (BSI)

24 ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:24
20 ತಿಳಿವುಗಳ ಹೋಲಿಕೆ  

ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಮರುದಿವಸ ಅವರು ಬೆಳಿಗ್ಗೆ ಎದ್ದು ಬಲಿಪೀಠವನ್ನು ಕಟ್ಟಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಗಿಲ್ಯಾದನ ವಂಶದವರು ಇವರು : ಈಯೆಜೆರನಿಂದ ಈಯೆಜೆರ್ಯರು, ಹೇಲಿಕನಿಂದ ಹೇಲಿಕ್ಯರು,


ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಸೌಲನು ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಬಲಿಪೀಠಗಳಲ್ಲಿ ಇದೇ ಮೊದಲನೆಯದು.


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು