ನ್ಯಾಯಸ್ಥಾಪಕರು 6:28 - ಕನ್ನಡ ಸತ್ಯವೇದವು C.L. Bible (BSI)28 ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟದ್ದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹ ಸ್ತಂಭವು ಕಡಿಯಲ್ಪಟ್ಟದ್ದನ್ನೂ ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರಸ್ತಂಭವು ಕಡಿದು ಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ್ದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಎರಡನೆಯ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು. ಅಧ್ಯಾಯವನ್ನು ನೋಡಿ |