ನ್ಯಾಯಸ್ಥಾಪಕರು 6:34 - ಕನ್ನಡ ಸತ್ಯವೇದವು C.L. Bible (BSI)34 ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು. ಅಧ್ಯಾಯವನ್ನು ನೋಡಿ |
ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.