Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:4 - ಕನ್ನಡ ಸತ್ಯವೇದವು C.L. Bible (BSI)

4 ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:4
12 ತಿಳಿವುಗಳ ಹೋಲಿಕೆ  

ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.


ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?


ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು