ನ್ಯಾಯಸ್ಥಾಪಕರು 6:8 - ಕನ್ನಡ ಸತ್ಯವೇದವು C.L. Bible (BSI)8 ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಯೆಹೋವನು ಅವರ ಹತ್ತಿರಕ್ಕೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಆ ಪ್ರವಾದಿಯು ಇಸ್ರೇಲರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಅಲ್ಲಿಂದ ಹೊರಗೆ ತಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು. ಅಧ್ಯಾಯವನ್ನು ನೋಡಿ |