Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:12 - ಕನ್ನಡ ಸತ್ಯವೇದವು C.L. Bible (BSI)

12 ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:12
16 ತಿಳಿವುಗಳ ಹೋಲಿಕೆ  

ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.


ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II


ಅವನ ಜ್ಞಾನ ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲು, ಈಜಿಪ್ಟರ ಸರ್ವಜ್ಞಾನಕ್ಕಿಂತಲು ಮಿಗಿಲಾಗಿತ್ತು.


ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆ; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿ ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿಬಿಟ್ಟಿತು,” ಎಂದು ಹೇಳಿದನು. ಅವನ ಜೊತೆಗಾರನು,


ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು