ನ್ಯಾಯಸ್ಥಾಪಕರು 7:14 - ಕನ್ನಡ ಸತ್ಯವೇದವು C.L. Bible (BSI)14 “ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅಧ್ಯಾಯವನ್ನು ನೋಡಿ |