Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:21 - ಕನ್ನಡ ಸತ್ಯವೇದವು C.L. Bible (BSI)

21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಗಲಿಬಿಲಿಗೊಂಡು ಚೀರುತ್ತಾ ಓಡಿಹೋಗಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು; ಪಾಳೆಯದವರಾದರೋ ಭ್ರಾಂತರಾಗಿ ಕೂಗುತ್ತಾ ಓಡಿಹೋಗ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಗಿದ್ಯೋನನ ಜನರು ನಿಂತಲ್ಲಿಯೇ ನಿಂತುಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿಹೋಗಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:21
12 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು