ನ್ಯಾಯಸ್ಥಾಪಕರು 7:7 - ಕನ್ನಡ ಸತ್ಯವೇದವು C.L. Bible (BSI)7 ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಯೆಹೋವನು ಗಿದ್ಯೋನನಿಗೆ - ನೀರನ್ನು ನೆಕ್ಕಿದ ಆ ಮುನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ವಿುದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು. ಅಧ್ಯಾಯವನ್ನು ನೋಡಿ |