ನ್ಯಾಯಸ್ಥಾಪಕರು 8:10 - ಕನ್ನಡ ಸತ್ಯವೇದವು C.L. Bible (BSI)10 ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು. ಅಧ್ಯಾಯವನ್ನು ನೋಡಿ |