Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:12 - ಕನ್ನಡ ಸತ್ಯವೇದವು C.L. Bible (BSI)

12 ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜೆಬಹನೂ ಚಲ್ಮುನ್ನನೂ ಓಡಿ ಹೋಗಲಾಗಿ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:12
12 ತಿಳಿವುಗಳ ಹೋಲಿಕೆ  

ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II


ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.


ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದನು.


ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು.


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು