ನ್ಯಾಯಸ್ಥಾಪಕರು 8:26 - ಕನ್ನಡ ಸತ್ಯವೇದವು C.L. Bible (BSI)26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು. ಅಧ್ಯಾಯವನ್ನು ನೋಡಿ |