Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:3 - ಕನ್ನಡ ಸತ್ಯವೇದವು C.L. Bible (BSI)

3 ದೇವರು ಮಿದ್ಯಾನ್ಯರ ನಾಯಕರಾದ ಓರೇಬ್ ಮತ್ತು ಜೇಬರನ್ನೇ ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರಲ್ಲವೆ; ಇದಕ್ಕೆ ಸರಿಸಮಾನವಾದದ್ದನ್ನು ನಾನೇನು ಮಾಡಿದ್ದೇನೆ? ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರ ಸಿಟ್ಟಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ನಿಮ್ಮ ಕೈಯಲ್ಲಿ ವಿುದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:3
15 ತಿಳಿವುಗಳ ಹೋಲಿಕೆ  

ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು.


ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದಿದ್ದರು. ಆದರೂ ಹಿಂದಟ್ಟುತ್ತಾ ಜೋರ್ಡನನ್ನು ದಾಟಿ ಸುಖೋತಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು