Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:34 - ಕನ್ನಡ ಸತ್ಯವೇದವು C.L. Bible (BSI)

34 ಸುತ್ತಮುತ್ತಲಿನ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:34
10 ತಿಳಿವುಗಳ ಹೋಲಿಕೆ  

ಮರೆತೇಬಿಟ್ಟರು ಆತನ ಭುಜಬಲವನು I ವೈರಿಗಳಿಂದ ಬಿಡುಗಡೆಯಾದಾ ಸಮಯವನು II


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II


ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು