Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:6 - ಕನ್ನಡ ಸತ್ಯವೇದವು C.L. Bible (BSI)

6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬರವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?”, ಎಂದು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಸುಖೋತಿನ ಮುಖಂಡರು ಅವನಿಗೆ - ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:6
11 ತಿಳಿವುಗಳ ಹೋಲಿಕೆ  

ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.


ಆಗ ಇಸ್ರಯೇಲರ ಅರಸನಾದ ಯೋವಾಷ ಜುದೇಯದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು,’ ಎಂದು ಹೇಳಿಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗ ಅಲ್ಲಿಂದ ಹಾದುಹೋಗುತ್ತಿರುವಾಗ ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ;


‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು