ನ್ಯಾಯಸ್ಥಾಪಕರು 9:23 - ಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23-24 ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿ |