Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:25 - ಕನ್ನಡ ಸತ್ಯವೇದವು C.L. Bible (BSI)

25 ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆಮಾಡುತ್ತಿದ್ದರು. ಈ ವರ್ತಮಾನ ಅಬೀಮೆಲೆಕನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶೆಕೆವಿುನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲುಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:25
6 ತಿಳಿವುಗಳ ಹೋಲಿಕೆ  

ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸೆ ಇಟ್ಟರು.


ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು