Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:28 - ಕನ್ನಡ ಸತ್ಯವೇದವು C.L. Bible (BSI)

28 ಎಬೇದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನಿಗೆ ಏಕೆ ಸೇವೆಮಾಡಬೇಕು? ಅವನು ಯೆರುಬ್ಬಾಳನ ಮಗನಲ್ಲವೇ? ಅವನ ಪುರಾಧಿಕಾರಿ ಜೆಬುನಲ್ಲವೇ? ನಾವು ಅವನಿಗೆ ಏಕೆ ಸೇವೆಮಾಡಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರಿಗೇ ಸೇವೆಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಏಬೆದನ ಮಗನಾದ ಗಾಳನು, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬೂಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ. ಇವನನ್ನು ನಾವು ಏಕೆ ಸೇವಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:28
8 ತಿಳಿವುಗಳ ಹೋಲಿಕೆ  

ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸೆ ಇಟ್ಟರು.


ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.


ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಅಟ್ಟಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು