ನ್ಯಾಯಸ್ಥಾಪಕರು 9:4 - ಕನ್ನಡ ಸತ್ಯವೇದವು C.L. Bible (BSI)4 ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು. ಅಧ್ಯಾಯವನ್ನು ನೋಡಿ |