Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:45 - ಕನ್ನಡ ಸತ್ಯವೇದವು C.L. Bible (BSI)

45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅಬೀಮೆಲೆಕನು ಆ ದಿವಸವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸಂಹರಿಸಿ ಊರನ್ನು ಕೆಡವಿಬಿಟ್ಟು ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:45
8 ತಿಳಿವುಗಳ ಹೋಲಿಕೆ  

ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿಬಂದು ಊರಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು