ನ್ಯಾಯಸ್ಥಾಪಕರು 9:5 - ಕನ್ನಡ ಸತ್ಯವೇದವು C.L. Bible (BSI)5 ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು. ಅಧ್ಯಾಯವನ್ನು ನೋಡಿ |