53 ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.
ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.
ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.
ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.
ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.
ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.