Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:57 - ಕನ್ನಡ ಸತ್ಯವೇದವು C.L. Bible (BSI)

57 ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:57
14 ತಿಳಿವುಗಳ ಹೋಲಿಕೆ  

ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”


ಇವನ ಕಾಲದಲ್ಲೆ ಬೇತೇಲಿನವನಾದ ಹೀಯೇಲನು ಜೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನಾದ ಅಬೀರಾಮನನ್ನು ಹಾಗು ಅದಕ್ಕೆ ಬಾಗಿಲುಗಳನ್ನಿಡುವಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಸರ್ವೇಶ್ವರ ನೂನನ ಮಗ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.


ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದರು.


ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಯೇಲರನ್ನು ಕಾಪಾಡಿದನು. ಅವನು ಎಫ್ರಯಿಮ್ ಮಲೆನಾಡಿನ ಶಾಮೀರವೆಂಬ ಊರಲ್ಲಿ ವಾಸವಾಗಿದ್ದನು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು