ನ್ಯಾಯಸ್ಥಾಪಕರು 9:9 - ಕನ್ನಡ ಸತ್ಯವೇದವು C.L. Bible (BSI)9 ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಅದು ಅವುಗಳಿಗೆ - ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ ಮನುಷ್ಯರೂ ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆದರೆ ಆಲಿವ್ ಮರವು, ‘ಜನರು ಮತ್ತು ದೇವತೆಗಳು ನನ್ನ ಎಣ್ಣೆಗಾಗಿ ನನ್ನನ್ನು ತುಂಬ ಹೊಗಳುತ್ತಾರೆ; ಬೇರೆ ಮರಗಳ ಮೇಲೆ ಆಳುವುದಕ್ಕಾಗಿ ನಾನು ಎಣ್ಣೆ ಮಾಡುವುದನ್ನು ಬಿಡಬೇಕೇ?’ ಎಂದು ಕೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.