Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:4
37 ತಿಳಿವುಗಳ ಹೋಲಿಕೆ  

ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.


ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.


ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು I ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು