Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:5 - ಕನ್ನಡ ಸತ್ಯವೇದವು C.L. Bible (BSI)

5 ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇವಿುನ ನಾರಿಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಚಂದವುಳ್ಳವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನ ಪುತ್ರಿಯರೇ, ನಾನು ಕಪ್ಪಾದವಳು ಆದರೂ ಸುಂದರಿ. ಕೇದಾರಿನ ಗುಡಾರಗಳಂತೆಯೂ, ಸೊಲೊಮೋನನ ಡೇರೆಯ ತೆರೆಗಳಂತೆಯೂ ಚೆಲುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:5
29 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


“ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


“ಜೆರುಸಲೇಮಿನ ಮಹಿಳೆಯರೇ, ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಅವನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಾನು ನಿಮಗೆ ಆಣೆಯಿಟ್ಟು ಹೇಳುತ್ತೇನೆ. ಮಹಿಳೆಯರು :


ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.


“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು