ಪರಮಗೀತೆ 1:8 - ಕನ್ನಡ ಸತ್ಯವೇದವು C.L. Bible (BSI)8 ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನಿನಗೆ ಗೊತ್ತಿಲ್ಲವಾದರೆ, ನೀನು ಮಂದೆಯ ಜಾಡಿನಲ್ಲಿಯೇ ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು. ಅಧ್ಯಾಯವನ್ನು ನೋಡಿ |