Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:14 - ಕನ್ನಡ ಸತ್ಯವೇದವು C.L. Bible (BSI)

14 ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:14
41 ತಿಳಿವುಗಳ ಹೋಲಿಕೆ  

ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ :


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


“ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.


ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ :


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II


ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು