Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:16 - ಕನ್ನಡ ಸತ್ಯವೇದವು C.L. Bible (BSI)

16 ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಪ್ರಿಯನು ನನ್ನವನೇ! ನಾನು ಅವನವಳೇ! ಹಗಲು ತನ್ನ ಕೊನೆ ಉಸಿರೆಳೆಯುವತನಕ, ನೆರಳು ಓಡಿಹೋಗುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:16
15 ತಿಳಿವುಗಳ ಹೋಲಿಕೆ  

ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ :


ನಾನು ನನ್ನ ನಲ್ಲನ ನಲ್ಲೆ ಆತನ ಆಸೆ ನನ್ನ ಮೇಲೆ !


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.


ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!


ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ :


ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ :


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು